ಮುಂಬೈ: ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಕೋವಿಡ್ ಸೋಂಕು ಮತ್ತು ನ್ಯುಮೋನಿಯಾ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರು ಕೃತಕ ಆಮ್ಲಜನಕ ಬೆಂಬಲದಲ್ಲಿ ಚಿಕಿತ್ಸೆ ಪಡೆದಿದ್ದಾರೆ.
Advertisement
ಅವರು ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕಿಗೆ ಒಳಗಾದರು. ಅಲ್ಲದೆ ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಸಲೂನ್ ಶಾಪ್‌ಗೆ ಬೆಂಕಿ ಹಚ್ಚಿದ್ದ ಆರೋಪಿಗಳು ಪೊಲೀಸರ ವಶಕ್ಕೆ
ಮೂರು ವಾರಗಳ ಸೆರೆವಾಸದ ನಂತರ ಮೆಕ್ಸಿಕೋದಿಂದ ಲಂಡನ್ ಗೆ ಕರೆತರಲಾಗಿದೆ ಎಂದು ಲಲಿತ್ ಮೋದಿ ಇನ್ಸ್ಟಾ ಗ್ರಾಮ್ ಮೂಲಕ ಹೇಳಿದ್ದಾರೆ.