ಲಕ್ನೋ : ಮನೆಗೆ ಬೆಂಕಿ ಬಿದ್ದು ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗ ಗಂಭೀರ ಗಾಯಗೊಂಡಿರುವ ಘಟನೆ ಲಕ್ನೋದ ಇಂದಿರಾ ನಗರದಲ್ಲಿ ನಡೆದಿದೆ.
ದಿನೇಶ್ ಚಂದ್ರ ಪಾಂಡೆ ಬೆಂಕಿ ಅವಘಡದಲ್ಲಿ ಮೃತಪಟ್ಟ ನಿವೃತ್ತ ಐಪಿಎಸ್ ಅಧಿಕಾರಿ, ಪತ್ನಿ ಅರುಣಾ ಮತ್ತು ಪುತ್ರ ಶಶಾಂಕ್ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದ್ದಕಿದ್ದಂತೆ ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದ್ದು ಈ ವೇಳೆ ಮನೆಯೊಳಗಿದ್ದ ಮಾಜಿ ಐಪಿಎಸ್ ಅಧಿಕಾರಿ ಮತ್ತು ಕುಟುಂಬ ಸದಸ್ಯರು ಮನೆಯಿಂದ ಹೊರಬರಲು ಯತ್ನಿಸಿದ್ದಾರೆ ಆದರೆ ಬೆಂಕಿ ಮನೆಯನ್ನು ಆವರಿಸಿದ್ದರಿಂದ ಹೊರಬರಲು ಸಾಧ್ಯವಾಗದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ, ಇತ್ತ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಇಂದಿರಾನಗರ ಅಗ್ನಿಶಾಮಕ ಠಾಣೆಯ ತಂಡವು ಮೂರು ಅಗ್ನಿಶಾಮಕ ಟೆಂಡರ್‌ಗಳೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದ ವೇಳೆ ಬೆಂಕಿಯ ಪ್ರಮಾಣ ಹೆಚ್ಚಾಗಿದ್ದರಿಂದ ಕಟ್ಟಡದ ಒಳಗೆ ಹೊಗೆ ಆವರಿಸಿಕೊಂಡಿತ್ತು ಬಳಿಕ ಆಮ್ಲಜನಕದ ಮಾಸ್ಕ್ ಧರಿಸಿ, 8 ರಿಂದ 10 ಮಂದಿ ಅಗ್ನಿಶಾಮಕ ತಂಡವು ಮನೆಯ ಮೊದಲ ಮಹಡಿಗೆ ತಲುಪಿತು, ಅಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದೊಳಗೆ ಸಿಲುಕಿರುವ ಜನರನ್ನು ಕರೆದರು. ಅವರಿಗೆ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಶೋಧ ಕಾರ್ಯಾಚರಣೆ ಆರಂಭಿಸಿದರು. ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿ ದಿನೇಶ್ ಚಂದ್ರ ಪಾಂಡೆ ಮತ್ತು ಅವರ ಕುಟುಂಬ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ನಿವೃತ್ತ ಅಧಿಕಾರಿ ಸಾವನ್ನಪ್ಪಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಪತ್ನಿ ಮತ್ತು ಮಗನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಕೊಡಗಿನಲ್ಲಿ ಲೋಕಾಯುಕ್ತ ದಾಳಿ : ಮೂವರು ಅಧಿಕಾರಿಗಳ ಬಳಿ ನಗದು, ಚಿನ್ನಾಭರಣ ಪತ್ತೆ