Advertisement

ಅಣ್ಣಾಮಲೈ ಬಿಜೆಪಿ ಸೇರ್ಪಡೆ ಖಚಿತ: ತಮಿಳುನಾಡು ರಾಜಕೀಯದಲ್ಲಿ ಕಮಲ ಅರಳಿಸಲು ಅಣ್ಣಾಮಲೈ ಸಜ್ಜು

03:24 PM Aug 25, 2020 | keerthan |

ಹೊಸದಿಲ್ಲಿ: ಕರ್ನಾಟಕ ಕೇಡರ್ ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ದರಾಗಿದ್ದ ಕೆ. ಅಣ್ಣಾಮಲೈ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೆ ಸೇರುವುದು ಖಚಿತವಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ದೆಹಲಿಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

Advertisement

ತಮಿಳುನಾಡಿನ ಕರೂರು ಮೂಲದವರಾದ ಕೆ ಅಣ್ಣಾಮಲೈ ಅವರು ಐಪಿಎಸ್ ಅಧಿಕಾರಿಯಾಗಿ ಕಾರ್ಕಳದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ಆರಂಭಿಸಿದ ಅವರು ನಂತರ ಉಡುಪಿ, ಚಿಕ್ಕಮಗಳೂರು ಮತ್ತು ಬೆಂಗಳೂರು ದಕ್ಷಿಣದಲ್ಲಿ ಸೇವೆ ಸಲ್ಲಿಸಿದ್ದರು. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಅಣ್ಣಾಮಲೈ ಅವರು ನಂತರ ತಮಿಳುನಾಡಿನಲ್ಲಿ ಕೃಷಿ ಕೆಲಸ ಸೇರಿದಂತೆ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು.

ಸದ್ಯ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಅವರಿಗೆ ತಮಿಳುನಾಡಿನಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ ವರ್ಷದ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿಯು ದಕ್ಷಿಣದ ರಾಜ್ಯದತ್ತ ಚಿತ್ತ ಹರಿಸಿದೆ.

ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದು, ಅಣ್ಣಾಮಲೈ ಅವರಿಗೆ ಸ್ವಾಗತ ಕೋರಿದ್ದಾರೆ. ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ ಎಂದು ಸುಧಾಕರ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next