Advertisement

ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಉಡುಪಿಯ ಯು.ಆರ್‌.ರಾವ್‌ ವಿಧಿವಶ

08:04 AM Jul 24, 2017 | Team Udayavani |

ಬೆಂಗಳೂರು: ಅಂತರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿ ಇಸ್ರೋದ ಮಾಜಿ ಮುಖ್ಯಸ್ಥ ಪದ್ಮವಿಭೂಷಣ ಪ್ರೊ. ಯು.ಆರ್‌.ರಾವ್‌ (85) ಸೋಮವಾರ ನಸುಕಿನ ಜಾವ 2.55ರ ಸುಮಾರಿಗೆ ವಿಧಿವಶರಾಗಿದ್ದಾರೆ.

Advertisement

ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ಇಂದಿರಾನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ಯು.ಆರ್‌.ರಾವ್‌ ಅವರಿಗೆ 1976ರಲ್ಲಿ ಭಾರತ ಸರಕಾರ ಪದ್ಮಭೂಷಣ ಮತ್ತು 2017ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

ಯು.ಆರ್‌.ರಾವ್‌ ಅವರು ಉಡುಪಿಯ ಅದಮಾರುವಿನಲ್ಲಿ 1932 ರಲ್ಲಿ ಜನಿಸಿದವರು. ಅಂತಾರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿಯಾಗಿರುವ ರಾವ್‌ ಅವರು ಭಾರತದ ಮೊದಲ ಉಪಗ್ರಹ ‘ಆರ್ಯಭಟ’ದ ರೂವಾರಿ. ಆ ಬಳಿಕ ಭಾಸ್ಕರ, ಆ್ಯಪಲ್‌, ರೋಹಿಣಿ, ಇನ್ಸಾಟ್‌–1, ಇನ್ಸಾಟ್‌–2, ಐಆರ್‌ಎಸ್‌–1 ಎ, ಐಆರ್‌ಎಸ್‌–1ಬಿ ಸೇರಿದಂತೆ ಒಟ್ಟು 18 ಉಪಗ್ರಹಗಳ ನಿರ್ಮಾಣದಲ್ಲಿ ಮುಖ್ಯ ಮಾರ್ಗದರ್ಶಕರು.

Advertisement

Udayavani is now on Telegram. Click here to join our channel and stay updated with the latest news.

Next