Advertisement

Karnataka Election ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲು

10:59 PM Apr 22, 2023 | Team Udayavani |

ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವೈದ್ಯರ ಸಲಹೆಯ ಮೇರೆಗೆ ಶನಿವಾರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಜೆಡಿಎಸ್ ಅಭ್ಯರ್ಥಿ ಗಳ ಆಯ್ಕೆ, ನಾಮಪತ್ರ ಸಲ್ಲಿಕೆ ಸೇರಿ ನಿರಂತರ ಪ್ರವಾಸ ಮಾಡಿದ್ದ ಅವರು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next