Advertisement

ಆನಂದ್‌ ಅಸ್ನೋಟಿಕರ್‌ ಜೆಡಿಎಸ್‌ ಸೇರ್ಪಡೆ

06:00 AM Jan 16, 2018 | Team Udayavani |

ಬೆಂಗಳೂರು: ಮಾಜಿ ಸಚಿವ ಆನಂದ್‌ ಅಸ್ನೋಟಿಕರ್‌ ಜೆಡಿಎಸ್‌ ಸೇರ್ಪಡೆಯಾಗಿದ್ದು, ಇದು ಪ್ರಾರಂಭವಷ್ಟೇ,
ಕಾಂಗ್ರೆಸ್‌ ಹಾಗೂ ಬಿಜೆಪಿಯ ಹಲವು ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

ಪದ್ಮನಾಭನಗರದಲ್ಲಿ ದೇವೇಗೌಡರ ಸಮ್ಮುಖ ಆನಂದ್‌ ಅಸ್ನೋಟಿಕರ್‌ ಜೆಡಿಎಸ್‌ ಸೇರ್ಪಡೆ ನಂತರ ಸುದ್ದಿಗೋಷ್ಠಿ
ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯ ಸಾಕಷ್ಟು ನಾಯಕ
ರಲ್ಲಿದೆ. ಬಳ್ಳಾರಿ, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದಲ್ಲಿ ಹಲವು ನಾಯಕರು ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ
ಬದಲಾವಣೆ ತರಲು ಬಯಸಿದ್ದಾರೆ. ಸೂಕ್ತ ಸಂದರ್ಭದಲ್ಲಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ಜೆಡಿಎಸ್‌ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆಯೇ ಎಂಬ ಪ್ರಶ್ನೆಗೆ, ಅವರು ನನ್ನ ಜತೆ ಮಾತನಾಡಿಲ್ಲ ಎಂದು ಉತ್ತರಿಸಿದರು.

ರಾಜ್ಯದ ಜನತೆ ಕಾಂಗ್ರೆಸ್‌ ಹಾಗೂ ಬಿಜೆಪಿ ದುರಾಡಳಿತ ನೋಡಿ ಬೇಸರಗೊಂಡಿದ್ದಾರೆ. ಹಿಂದುತ್ವ, ಮೃದು ಹಿಂದುತ್ವ
ಇವೆಲ್ಲವೂ ನಡೆಯುವುದಿಲ್ಲ. ಕರ್ನಾಟಕದ ಅಭಿವೃದ್ಧಿ ನಮ್ಮ ಮಂತ ಎಂದು ತಿಳಿಸಿದರು. ಆನಂದ್‌ ಅಸ್ನೋಟಿಕರ್‌ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಆತಂಕ ತಂದಿದೆ. ನನ್ನ ಜಿಲ್ಲೆಯ ಅಭಿವೃದ್ಧಿಗಾಗಿ ನಾನು ಜೆಡಿಎಸ್‌ ಸೇರುತ್ತಿದ್ದೇನೆ ಎಂದು ಹೇಳಿದರು. ಶಾಸಕ ಮಧು ಬಂಗಾರಪ್ಪ, ವಿಧಾನಪರಿಷತ್‌ ಸದಸ್ಯರಾದ ರಮೇಶ್‌ಬಾಬು,ಕಾಂತರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next