Advertisement
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
Related Articles
Advertisement
1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆ ಸಮಯದಲ್ಲಿ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಲು ಎಸ್‌ಎಂ ಕೃಷ್ಣ ಅವರ ಪಾತ್ರ ಪ್ರಧಾನವಾಗಿತ್ತು.
1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಅವರು ಅದೇ ವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಂದರ್ಭದಲ್ಲಿ ಅವರ ನೇತೃತ್ವದಲ್ಲಿ ನಡೆದ ಪಾಂಚಜನ್ಯ ಯಾತ್ರೆ ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಶಕ್ತಿ ತುಂಬಿತ್ತು.
ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023 ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.
ಬದಲಾದ ರಾಜಕೀಯ ಸನ್ನಿವೇಶ ಬಿಜೆಪಿ ಸೇರ್ಪಡೆ: ತಮ್ಮ ಇಳಿ ವಯಸ್ಸಿನಲ್ಲಿ ಎಸ್‌ಎಂ ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರಿದ್ದರು. 2017 ರ ಜನವರಿಯಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.
ವಯೋಸಹಜ ಕಾಯಿಲೆಯ ಸಮಸ್ಯೆಯಿಂದಾಗಿ ಅವರು 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದರು.
ವೈಯಕ್ತಿಕ ಜೀವನ: ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್‌ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.