ಕೊಚ್ಚಿ: ಸುಮಾರು 5 ದಶಕಗಳ ಕಾಲ ಕೇರಳ ರಾಜಕೀಯದಲ್ಲಿ ಪ್ರಭಾವಿಯಾಗಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ.ಎಂ.ಮಣಿ (86) ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಸಂಜೆ 4.57ಕ್ಕೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದರು ಎಂದು ವೈದ್ಯರು ತಿಳಿಸಿದ್ದಾರೆ.
ಬುಧವಾರ ಕೊಟ್ಟಾಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಗುರುವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕೆ.ಎಂ.ಮಣಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕೇರಳ ಸಿಎಂ ಪಿಣರಾಯಿ, ಕಾಂಗ್ರೆಸ್ ನಾಯಕ ಕೆಸಿ ವೇಣು ಗೋಪಾಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಾಲಾ ಅಸೆಂಬ್ಲಿ ಕ್ಷೇತ್ರವನ್ನು ಬರೋ ಬ್ಬರಿ 54 ವರ್ಷಗಳಿಂದಲೂ ಮಣಿ ಅವರೇ ಪ್ರತಿನಿಧಿಸುತ್ತಾ ಬಂದಿದ್ದು, ವಿತ್ತ ಸಚಿವರಾಗಿ ಒಟ್ಟು 13 ಬಜೆಟ್‌ಗಳನ್ನೂ ಅವರು ಮಂಡಿಸಿದ್ದಾರೆ.