Advertisement
ಉದ್ಧವ್ ಠಾಕ್ರೆ ಅವರು ಶನಿವಾರದಂದು ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಅದೇ ದಿನ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಂಡುಬಂದ ನಿಟ್ಟಿನಲ್ಲಿ ಕೂಡಲೇ ಅವರನ್ನು ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉದ್ಧವ್ ಠಾಕ್ರೆ ಅವರು ಈ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿದ್ದು ಇಂದು ಕೂಡ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಿದ್ದಾರೆ. ಸದ್ಯ ಠಾಕ್ರೆ ಅವರ ಅರೋಗ್ಯ ಸ್ಥಿರವಾಗಿದ್ದು ನಾಳೆ(ಅ.15) ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ
Related Articles
Advertisement