Advertisement

ಡಿಜೆ ಹಳ್ಳಿ ಗಲಭೆ ಪ್ರಕರಣ: ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಬಂಧನ

07:15 AM Nov 17, 2020 | keerthan |

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಕೋವಿಡ್ ಸೋಂಕು ತಾಗಿರುವುದಾಗಿ ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಕ್ಟೋಬರ್ 23ರಂದು ಆಸ್ಪತ್ರೆಯಿಂದ ಪರಾರಿಯಾಗಿದ್ದ. ತೀವ್ರ ಹುಡುಕಾಟದ ನಂತರ ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಸಂಜೆ ಸಂಪತ್ ರಾಜ್ ತನ್ನ ಪುಲಕೇಶಿ ನಗರದ ಮನೆಗೆ ಬರುವ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ. 22 ದಿನಗಳ ಕಾಲ ತಲೆಮರೆಸಿಕೊಂಡು ಓಡಾಡುತ್ತಿದ್ದ ಮಾಜಿ ಮೇಯರ್ ಕೈಗೆ ಕೊನೆಗೂ ಪೊಲೀಸರು ಕೋಳ ಹಾಕಿದ್ದಾರೆ.

ಸೋಮವಾರ ಆಪ್ತನ ಅರೆಸ್ಟ್: ಸಂಪತ್ ರಾಜ್ ಗೆ ತಪ್ಪಿಸಿಕೊಂಡು ಹೋಗಲು ಸಹಾಯ ಮಾಡಿದ್ದ ಆರೋಪದಲ್ಲಿ ಆತನ ಆಪ್ತ ರಿಯಾಜುದ್ದೀನ್ ನನ್ನು ಸೋಮವಾರ ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆ ನಡೆಸಿದ ಕೆಲವೇ ಗಂಟೆಗಳಲ್ಲಿ ಸಂಪತ್ ರಾಜ್ ನ ಬಂಧನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next