Advertisement

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

10:24 PM Apr 18, 2024 | Team Udayavani |

ಬೆಂಗಳೂರು:  2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಈಗ ಮತ್ತೆ ಕಾಂಗ್ರೆಸ್‌ಗೆ ಮರಳಲು ಮುಂದಾಗಿದ್ದಾರೆ.

Advertisement

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಮಾಲೀಕಯ್ಯ ಗುತ್ತೇದಾರ್‌ ಬೆಳಗ್ಗೆ 9.30ಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಕೆ ದಿನವೇ ಗುತ್ತೇದಾರ್‌ ಕಾಂಗ್ರೆಸ್‌ಗೆ ಸೇರ್ಪಡೆಯಾಗಬೇಕಿತ್ತು. ಕೆಲವು ಕಾರಣಾಂತರಗಳಿಂದ ಅಂದು ಸಾಧ್ಯವಾಗಲಿಲ್ಲ.ಸಹೋದರ ನಿತಿನ್‌ ಗುತ್ತೇದಾರ್‌ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆ ಹಿನ್ನೆಲೆಯಲ್ಲಿ ಮಾಲೀಕಯ್ಯ  ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವುದು ಅನಿವಾರ್ಯವಾಗಿತ್ತು ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next