Advertisement

ಮಾಜಿ ಸಚಿವ ಬಿ.ಎಸ್‌. ಪಾಟೀಲ ಸಾಸನೂರ ನಿಧನ

11:51 AM Jun 11, 2018 | |

ವಿಜಯಪುರ: ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಬಿ.ಎಸ್‌. ಪಾಟೀಲ ಸಾಸನೂರ (87) ಭಾನುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಗರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 8:15ರ ವೇಳೆ ಮೃತಪಟ್ಟಿದ್ದಾರೆ.

Advertisement

ಹಿರೂರ ಗ್ರಾಮದ ಭೋಗೇಶ್ವರ ಪ್ರೌಢಶಾಲೆ ಆವರಣದಲ್ಲಿ ಸೋಮವರ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ತವರೂರು ಸಾಸನೂರ ಗ್ರಾಮದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ದೇವರಹಿಪ್ಪರಗಿ ಹಾಲಿ ಶಾಸಕ ಸೋಮನಗೌಡ ಪಾಟೀಲ ಅವರು ಬಿ.ಎಸ್‌. ಪಾಟೀಲ ಅವರ ಪುತ್ರ. ಕಳೆದ ಒಂದು ದಶಕದಿಂದ ಬಿ.ಎಸ್‌.ಪಾಟೀಲ ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದರು. ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ 1978, 1983, 1989, 1994, 1999ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

ಐದು ಬಾರಿ ವಿಧಾನಸಭೆ ಪ್ರವೇಶಿಸಿದ್ದ ಅವರು, ಎರಡು ಬಾರಿ ಸಚಿವರಾಗಿದ್ದರು. 1994ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಸಾಸನೂರು, 1999ರಲ್ಲಿ ಎಸ್‌.ಎಂ. ಕೃಷ್ಣ  ಅವರ ಸರ್ಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಕೆಪಿಸಿಸಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next