Advertisement

BJP: ದಿಲ್ಲಿಯಲ್ಲಿ ಅರುಣ್‌ ಸಿಂಗ್‌ ಭೇಟಿ ಮಾಡಿದ ಮಾಜಿ ಸಚಿವ ಈಶ್ವರಪ್ಪ

12:39 AM Jan 11, 2024 | Team Udayavani |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಬುಧವಾರ ದಿಲ್ಲಿಯಲ್ಲಿ ಭೇಟಿ ಮಾಡಿದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ, ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು.

Advertisement

ಬೆಂಗಳೂರಿನಲ್ಲಿ ಅರುಣ್‌ ಸಿಂಗ್‌ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೆಲವು ಅಂಶಗಳನ್ನು ಪ್ರಸ್ತಾವಿಸಿದ್ದ ಅವರು, ಉಳಿದ ಕೆಲವು ಪ್ರಮುಖ ಅಂಶಗಳ ಚರ್ಚೆಗಾಗಿ ಅಮಿತ್‌ ಶಾ ಅವರ ಭೇಟಿಗೆ ಸಮಯಾವಕಾಶ ಕೇಳಿದ್ದರು. ಅದರಂತೆ ಮಂಗಳವಾರವೇ ದಿಲ್ಲಿಗೆ ತಲುಪಿದ್ದ ಅವರು, ಬುಧವಾರ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜ್ಯ ರಾಜಕಾರಣದ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಪ್ರಮುಖವಾಗಿ ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷದ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವುದೂ ಅಲ್ಲದೆ, ಅವರ ಗೆಲುವಿಗೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಪಕ್ಷ ನಿಷ್ಠನಾಗಿಯೂ ಇದ್ದೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಸಂಸತ್‌ ಕ್ಷೇತ್ರದಿಂದ ಪುತ್ರ ಕಾಂತೇಶ್‌ಗೆ ಟಿಕೆಟ್‌ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಇತ್ತ ಎರಡು ದಿನಗಳಿಂದ ದಿಲ್ಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು ಪಕ್ಷದ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿ ಮಾಡಿ ಕೆಲವು ವಿಚಾರಗಳನ್ನು ಪ್ರಸ್ತಾವಿಸಿದ್ದರು. ಆದರೆ ಗೃಹಸಚಿವ ಅಮಿತ್‌ ಶಾ ಅವರ ಭೇಟಿಗಾಗಿ ಇನ್ನೂ ಕಾದು ಕುಳಿತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next