Advertisement

ಯಾದಗಿರಿ: ಕೋವಿಡ್ -19 ಸೋಂಕು ದೃಢವಾಗಿದ್ದ ಮಾಜಿ ಸಚಿವ ಸಾವು

02:55 PM Jul 27, 2020 | keerthan |

ಯಾದಗಿರಿ: ಕೋವಿಡ್-19 ಸೋಂಕಿನ ಕಾರಣದಿಂದ ಜಿಲ್ಲೆಯ ಮಾಜಿ ಸಚಿವರೊಬ್ಬರು ಮರಣ ಹೊಂದಿದ್ದಾರೆ. ಕಲಬುರ್ಗಿಯ ಇಎಸ್ಐ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವರು ಇಂದು ಕೊನೆಯುಸಿರೆಳೆದಿದ್ದಾರೆ.

Advertisement

ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವರಾಗಿದ್ದ ಇವರಿಗೆ ಕಳೆದ ಐದು ದಿನಗಳ ಹಿಂದೆ ಕೊವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಎಂದು ದೃಢವಾಗಿತ್ತು. ನಂತರ ಕಲಬುರ್ಗಿಯ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮರಣಹೊಂದಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿ ಸುರಪುರ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಇವರು, ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಎಪಿಎಂಸಿ ಸಚಿವರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next