ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಕೆಲ ಕಾಲ ಅಂತರ ಕಾಪಾಡಿಕೊಂಡಿದ್ದ ಮಾಜಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಈಗ ಮತ್ತೆ ಸಿದ್ದರಾಮಯ್ಯ ಅವರ ಜತೆ ಕಾಣಿಸಿಕೊಳ್ಳಲಾರಂಭಿಸಿದ್ದು, ತಮಗೆ ಹಾಗೂ ತಮ್ಮ ಪುತ್ರನಿಗೆ ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ವಿಧಾನಸಭೆಯಲ್ಲಿ ಟಿ.ನರಸೀಪುರ ಕ್ಷೇತ್ರದಲ್ಲಿ ಸೋತ ಬಳಿಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎರಡರಿಂದಲೂ ಅಂತರ ಕಾಯ್ದುಕೊಂಡಿದ್ದ ಮಹಾದೇವಪ್ಪ ಈಗ ಮತ್ತೆ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ. ಈ ಬಾರಿ ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರ ಸುನೀಲ್ ಬೋಸ್ ಗೆ ಟಿ.ನರಸೀಪುರ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಶಂಕರನಾರಾಯಣ: ಶಾಲಾ ಕ್ರೀಡಾಕೂಟದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ; ಹಿಂ.ಜಾಗರಣದಿಂದ ಪ್ರತಿಭಟನೆ
ಅದೇ ರೀತಿ ಮಾಜಿ ಸಚಿವ ಶಿವಾನಂದ ಪಾಟೀಲ್ ವಿಜಯಪುರ ನಗರಕ್ಕೆ ಅವರ ಪುತ್ರಿ ಸಂಯುಕ್ತಾ ಪಾಟೀಲ್ ಬಸವನಬಾಗೇವಾಡಿ ಕ್ಷೇತ್ರದಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲಂ ವೀರಭದ್ರಪ್ಪ ಹಾಗೂ ಅವರ ಪುತ್ರ ಬಳ್ಳಾರಿ ನಗರ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿ ಕುತೂಹಲ ಮೂಡಿಸಿದ್ದಾರೆ.