Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟವು ಶುಕ್ರವಾರ ಮೀಸಲಾತಿ ಜಾರಿಸಂಬಂಧ ತೆಗೆದುಕೊಂಡಿರುವ ನಿರ್ಧಾರವು ಜಾರಿಗೆ ಬರುವುದಿಲ್ಲ. ಮುಂಬರುವ ಚುನಾವಣೆಯಲ್ಲಿಬಿಜೆಪಿ ಸೋಲು ಅನುಭವಿಸಲಿದೆ. ಹಾಗಾಗಿ ಈಸರ್ಕಾರದ ಕೊನೆಯ ನಿರ್ಧಾರ ಜಾರಿಯಾಗುವುದಿಲ್ಲ ಎಂದು ಹೇಳಿದರು.
Related Articles
Advertisement
ದಳ ಅಧಿಕಾರಕ್ಕೆ ಬಂದರೇ ಮೀಸಲಾತಿ ಖಚಿತ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರು ಬೇಸರಗೊಂಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಜನರಿಗಿರುವ ಸಿಟ್ಟು ಮರೆಸಿ ಗಮವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಕೈಗೊಂಡಿದೆ. ರಾಜ್ಯ ಸರ್ಕಾರದನಿರ್ಧಾರ ಜಾರಿಯಾಗಲು ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮುಂದುವರಿಸಲಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅನರ್ಹತೆ ಖಂಡನೀಯ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರನ್ನುಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದುಸರ್ವಾಧಿಕಾರಿ ಧೋರಣೆಯಾಗಿದೆ. ಸೂರತ್ ಜಿಲ್ಲಾ ನ್ಯಾಯಲದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವೇ ಕಾಲಾವಕಾಶ ನೀಡಿದೆ. ಮೇಲ್ಮನವಿ ಹೈ ಕೋರ್ಟ್‌ನಲ್ಲಿ ಇತ್ಯರ್ಥ ಆಗುವವರೆಗೂ ಕಾಯದೆಅನರ್ಹಗೊಳಿಸಿರುವುದು ಬಿಜೆಪಿ ದ್ವೇಷ ರಾಜಕಾರಣದ ಪರಮಾವಧಿಯಾಗಿದೆ. ರಾಹುಲ್ ಗಾಂಧಿ ಅವರ ಮುತ್ತಾತ, ಅಜ್ಜಿ, ಅವರ ತಂದೆ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಖಂಡನೀಯ ಎಂದರು.
ಸೋಮವಾರ ಹಾಸನದಲ್ಲಿ ಪ್ರತಿಭಟನೆ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪೊಲೀಸರ ಪಕ್ಷಪಾತ ಧೋರಣೆಯನ್ನು ಖಂಡಿಸಿ ಹಾಗೂ ಸಂಬಂಧಪಟ್ಟಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು ಹಾಗೂ ಚುನಾವಣಾ ಆಯೋಗಕ್ಕೂ ದೂರುನೀಡಲಾಗಿತ್ತು. ಆದರೆ ಇದು ವರೆಗೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಾಗಾಗಿ ಮಾ.27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಯವರ ಕಚೇರಿ ಬಳಿ ಜೆಡಿಎಸ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರುಮಾತನಾಡಿ, ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಬಗ್ಗೆಯೂನಿರ್ಧಾರ ಪ್ರಕಟಿಸಿತ್ತು. ಆದರೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಹೆಚ್ಚಳದ ಪ್ರಸ್ತಾವನೆಯನ್ನುಕಳುಹಿಸಿಲ್ಲ. ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬದ್ಧತೆ ಇಲ್ಲ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ ಎಂದು ಹೇಳಿದರು.
ಜೆಡಿಎಸ್ ಮುಖಂಡ ಕೆ.ಎಂ.ರಾಜೇಗೌಡ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೈಸೂರಿನ ಸಮಾವೇಶಕ್ಕೆ ಒಂದು ಲಕ್ಷ ಜನರು : ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಭಾನುವಾರ ನಡೆಯಲಿರುವ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಹಾಸನದಿಂದ ಒಂದು ಲಕ್ಷ ಜನರು ತೆರಳಿದ್ದಾರೆ. ಜೆಡಿಎಸ್ ಕಾರ್ಯಕರ್ತರುತೆರಳಲು ಬಸ್‌ಗಳ ವ್ಯವಸ್ಥೆ ಮಾಡಿದ್ದು, ಖಾಸಗಿ ವಾಹನಗಳಲ್ಲಿಯೂ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಅವರು ತಿಳಿಸಿದರು.