ಕೊಪ್ಪಳ: ಹನುಮ ಜಯಂತಿ ನಿಮಿತ್ತ ಇಂದು ಹನುಮ ಮಾಲೆ ಧರಿಸಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಗಂಗಾವತಿಯ ಅಂಜನಾದ್ರಿಯಲ್ಲಿ ಇಂದು ಆಂಜನೇಯನ ದರ್ಶನ ಪಡೆಯಲಿದ್ದಾರೆ.
ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ಹಮ್ಮಿಕೊಂಡಿದ್ದ ಸಂಕೀರ್ತನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಅಂಜನಾದ್ರಿಗೆ ತೆರಳಿ ಆಂಜನೇಯನ ದರ್ಶನ ಪಡೆಯಲಿದ್ದಾರೆ. ಬಳಿಕ ಹನುಮ ಮಾಲಾಧಾರಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.
ಜನಾರ್ದನ ರೆಡ್ಡಿಗೆ ಶಾಸಕ ಪರಣ್ಣ ಮುನವಳ್ಳಿ, ಸಂಸದ ಸಂಗಣ್ಣ ಕರಡಿ, ಕಾಡಾ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಬಿಜೆಪಿ ಮುಖಂಡರಾದ ತಿಮ್ಮಾರೆಡ್ಡಿ ಗಿಲ್ಲೆಸೂಗೂರು, ಮಾಜಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಸಂತೋಷ್ ಕೆಲೋಜಿ ಸೇರಿ ಇತರೆ ನಾಯಕರು ಸಾಥ್ ನೀಡಿದರು.