Advertisement

ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣಗುರುಗಳಿಗೆ ಅವಮಾನ: ಜೆ.ಆರ್.ಲೋಬೋ

01:02 PM May 18, 2022 | Team Udayavani |

ಮಂಗಳೂರು:  ಹತ್ತನೇ ತರಗತಿ ಪಠ್ಯ ಪುಸ್ತಕದಿಂದ ನಾರಾಯಣಗುರುಗಳ ವಿಷಯ ಕೈ ಬಿಟ್ಟು ಬಿಜೆಪಿ ಸರಕಾರ ಅವರಿಗೆ ಅವಮಾನ ಮಾಡುತ್ತಿದೆ. ಇದರ ವಿರುದ್ದ ಚಳವಳಿ ನಡೆಸಲಾಗುವುದು ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಎಚ್ಚರಿಕೆ ನೀಡಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಯಿತು. ಮಂಗಳೂರು ವಿಮಾನ ನಿಲ್ದಾಣ, ರೈಲು ನಿಲ್ದಾಣಕ್ಕೆ ಅವರ ಹೆಸರಿಡಲು ಒತ್ತಾಯಿಸಿದರೂ ಸರಕಾರ ಸ್ಪಂದಿಸಿಲ್ಲ.‌ ದ.ಕದ ಬ್ಯಾಂಕ್ ಗಳ ಹೆಸರು ಕೂಡ ಇಲ್ಲದಂತೆ ಸರಕಾರ ಮಾಡಿದೆ. ಹೆಜ್ಜೆ ಹೆಜ್ಜೆಗೂ ಕೇಂದ್ರ ಮತ್ತು ರಾಜ್ಯ ಸರಕಾರ ಅವಮಾನ ಮಾಡುತ್ತಿದೆ ಎಂದರು.

ಪಠ್ಯದಲ್ಲಿ ಬಸವಣ್ಣ, ಪೆರಿಯಾರ್ ಅವರ ಹೆಸರನ್ನೂ ಕೈ ಬಿಟ್ಟಿದೆ. ವಿದ್ಯಾರ್ಥಿಗಳಿಗೆ ಎಲ್ಲ ಧರ್ಮದ ಸಾಧಕರ ವಿಚಾರವೂ ತಿಳಿಯುವಂತಾಗಬೇಕು ಎಂದು ಅವರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next