Advertisement

ಮಾಜಿ ಸಚಿವ ಮಂಜುನಾಥ್‌ ನಿಧನ

11:11 PM Feb 03, 2020 | Lakshmi GovindaRaj |

ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಡಿ.ಮಂಜುನಾಥ್‌ (92) ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ದೀರ್ಘ‌ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದರು.

Advertisement

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಒಮ್ಮೆ ವಿಧಾನಪರಿಷತ್‌ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು 2006 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ, ಉನ್ನತ ಶಿಕ್ಷಣ ಖಾತೆ ನಿರ್ವಹಿಸಿದ್ದರು.

ಡಿ.ಮಂಜುನಾಥ್‌ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಡಿ.ಮಂಜುನಾಥ್‌ ಅವರು ಹಲವು ಖಾತೆ ಯಶಸ್ವಿಯಾಗಿ ನಿರ್ವಹಿಸಿದ್ದರು. ವಿಧಾನಪರಿಷತ್‌ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದರು.

ಇವರ ನಿಧನದಿಂದ ಮೌಲ್ಯಾಧಾರಿತ ರಾಜಕಾರಣದ ಪೀಳಿಗೆಯ ಕೊಂಡಿ ಯೊಂದು ಕಳಚಿದಂತಾಗಿದೆ ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದರು. ಡಿ.ಮಂಜುನಾಥ್‌ ಅವರು ಸಚಿವರಾಗಿ, ವಿಧಾನಪರಿಷತ್‌ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸದ್ದರು. ಸರಳ ವ್ಯಕ್ತಿತ್ವದ ಪ್ರತಿರೂಪದಂತಿದ್ದರು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next