Advertisement

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ, ಮಾಜಿ ಸಚಿವ ಪ್ರೊಫೆಸರ್ ಮುಮ್ತಾಜ್ ಅಲಿಖಾನ್ ನಿಧನ

09:43 AM Jun 07, 2021 | Team Udayavani |

ಚಿಕ್ಕಬಳ್ಳಾಪುರ: ರಾಜ್ಯ ಅಲ್ಪಸಂಖ್ಯಾತರ,ಹಜ್ ಮತ್ತು ವಕ್ಫ್ ಖಾತೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ ಪ್ರೊಫೆಸರ್ ಮುಮ್ತಾಜ್ ಅಲಿಖಾನ್ ನಿಧನ ಹೊಂದಿದ್ದಾರೆ.

Advertisement

ಅವರಿಗೆ 98 ವರ್ಷ ವಯಸ್ಸಾಗಿತ್ತು ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಡಿ ಪಾಳ್ಯ ಗ್ರಾಮದವರಾದ ಪ್ರೊಫೆಸರ್ ಮುಮ್ತಾಜ್ ಅಲಿಖಾನ್ 2008 ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅನೇಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು ಅದರಲ್ಲಿ ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ, ಕಂದಾಯ ಭವನ, ಹೊರವಲಯದಲ್ಲಿರುವ ಮೇಗಾ ಡೇರಿ ನಿರ್ಮಿಸಲು ದಾಖಲೆಗಳ ಹಸ್ತಾಂತರ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸವನ್ನು ನೆರವೇರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

Advertisement

ಇದನ್ನೂ ಓದಿ: ಅರ್ಧ ರಾಜ್ಯ ಅನ್‌ ಲಾಕ್‌ಗೆ ಸಜ್ಜು: ತಾಳ್ಮೆಇರಲಿ ಎಂದ ತಜ್ಞರು

ಮಾಜಿ ಸಚಿವ ಮಮ್ತಾಜ್ ಅಲಿ ಖಾನ್ ಅವರ ನಿಧನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವರ ನಿಧನದ ಸುದ್ದಿ ಬೇಸರ ತಂದಿದೆ 2008ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next