Advertisement

ಮಾಜಿ ಸಚಿವ,ನಿವೃತ್ತ ಐಎಎಸ್ ಅಧಿಕಾರಿ ಅಲೆಕ್ಸಾಂಡರ್ ನಿಧನ

09:11 PM Jan 14, 2022 | Team Udayavani |

ಬೆಂಗಳೂರು:ಮಾಜಿ ಸಚಿವ, ನಿವೃತ್ತ ಐಎಎಸ್ ಅಧಿಕಾರಿ ಡಾ.ಜೆ. ಅಲೆಗ್ಸಾಂಡರ್ (83) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.

Advertisement

ಅಲೆಕ್ಸಾಂಡರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರು ಎರಡು ಮಕ್ಕಳು ಹಾಗೂ 4 ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲಿ ನೆರವೇರಲಿದೆ.

ಮೂಲತಃ ಕೇರಳ ದವರಾದ ಅಲೆಗ್ಸಾಂಡರ್ ಅವರು ಐಎಎಸ್ ಅಧಿಕಾರಿಯಾಗಿ ರಾಜ್ಯ ಪ್ರವೇಶ ಮಾಡಿದ್ದರು. ನಂತರ ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಆನಂತರ ರಾಜ್ಯ ರಾಜಕಾರಣ ಪ್ರವೇಶ ಮಾಡಿ ಕಾಂಗ್ರೆಸ್‌ನಲ್ಲಿ ಅಂದಿನ ಬೆಂಗಳೂರು ಭಾರತಿನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸೋದ್ಯಮ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಹಿಂದುಳಿದ, ದಲಿತ ಹಾಗೂ ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸುವ ಅಂದಿನ ಪ್ರಮುಖ ರಾಜಕಾರಣಿಯಾಗಿದ್ದರು. ಅಲೆಗ್ಸಾಂಡರ್ ಬೆಂಗಳೂರು ಭಾಗದಲ್ಲಿ ದೀನದಲಿತರ ನಾಯಕ ಎಂದು ಹೆಸರು ಪಡೆದಿದ್ದರು. ಇವರು ಮುಖ್ಯಕಾರ್ಯದರ್ಶಿ ಆಗುವ ಮೊದಲೇ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಕೆಲಸ ಮಾಡಿದ ಏಕೈಕ ಅಧಿಕಾರಿ ಎನ್ನುವ ಖ್ಯಾತಿ ಪಡೆದಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next