ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ರೂ. ವಂಚನೆ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಶನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೋಶನ್ ಬೇಗ್ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಜಾಮೀನು ನೀಡಬೇಕೆಂದು ಬೇಗ್ ಪರ ವಕೀಲರು ಮನವಿ ಮಾಡಿದ್ದರು. ರೋಶನ್ ಬೇಗ್ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ರೋಶನ್ ಬೇಗ್ ನ್ಯಾಯಾಲಯದ ಅನುಮತಿ ಇಲ್ಲದೆ ಬೇಗ್ ಬೆಂಗಳೂರನ್ನು ಬಿಟ್ಟು ಹೊರ ಹೋಗುವಂತಿಲ್ಲ. ಸಿಬಿಐ ತನಿಖೆಗೆ ಸಂಪೂರ್ಣವಾದ ಸಹಕಾರ ನೀಡಬೇಕು. ಪ್ರತಿ ತಿಂಗಳ 2 ಮತ್ತು 4ನೇ ಸೋಮವಾರ ಹಾಗೂ ಸೂಚನೆ ನೀಡಿದಾಗ ಹಾಜರಾಗಬೇಕು. ಅವರು ಪಾಸ್‌ಪೋರ್ಟ್‌ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು. ತಮ್ಮ ವಿಳಾಸ ಬದಲಾದರೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು ಎಂದು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಅಣ್ಣಾ ಎಂದರೂ ಥಳಿಸಿದರು : ಅಪಹರಣಕಾರರ ಕುರಿತು ವರ್ತೂರು ಪ್ರಕಾಶ್ ಕಾರು ಚಾಲಕನ ಹೇಳಿಕೆ
ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಶನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು.