Advertisement

Chikkaballapur; ಮಾಜಿ ಸಚಿವ ಶಿವಶಂಕರ ರೆಡ್ಡಿ ಬಿಜೆಪಿಗೆ?

11:11 PM Feb 19, 2024 | Team Udayavani |

ಚಿಕ್ಕಬಳ್ಳಾಪುರ: ಮಾಜಿ ಸಚಿವ ಗೌರಿಬಿದನೂರಿನ ಎನ್‌.ಎಚ್‌.ಶಿವಶಂಕರ ರೆಡ್ಡಿಗೆ ಬಿಜೆಪಿ ಗಾಳ ಹಾಕಿದೆಯೆಂಬ ಮಾತು ಬಲವಾಗಿ ಕೇಳಿ ಬರುತ್ತಿದ್ದು, ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

Advertisement

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಚ್‌.ಪುಟ್ಟಸ್ವಾಮಿ ಗೌಡ ವಿರುದ್ಧ ಸೋತ ಬಳಿಕ ಎನ್‌.ಎಚ್‌.ಶಿವಶಂಕರ ರೆಡ್ಡಿ ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೊಟ್ಟರೆ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಈಗ ಬಿಜೆಪಿ ನಾಯಕರು ಅವರಿಗೆ ಲೋಕಸಭಾ ಚುನಾವಣೆಗೆ ಟಿಕೆಟ್‌ ಕೊಡುವ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

ವರ್ಗಾವಣೆ, ನಿಗಮ ಮಂಡಳಿ, ನಾಮ ನಿರ್ದೇಶನಗಳಲ್ಲಿ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಬೆಂಬಲಿಗರಿಗೆ ಕಾಂಗ್ರೆಸ್‌ ನಾಯಕರು ಹೆಚ್ಚು ಅವಕಾಶ ಕಲ್ಪಿಸುತ್ತಿರುವುದು ಶಿವಶಂಕರ ರೆಡ್ಡಿ ಅವರನ್ನು ಕೆರಳಿಸಿದೆ ಎನ್ನಲಾಗಿದೆ. ರಾಜ್ಯಸಭಾ ಚುನಾವಣೆ ಬಳಿಕ ಪ್ರತಿಕ್ರಿಯಿಸುವುದಾಗಿ ರೆಡ್ಡಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next