Advertisement

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

07:34 AM May 06, 2024 | Team Udayavani |

ಕಲಬುರಗಿ : ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ,  ಶಿಕ್ಷಣ ಪ್ರೇಮಿಗಳು, ಹಿರಿಯ ಮುತ್ಸದ್ದಿ  ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.‌

Advertisement

1983-85 ರ ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಶಾಸಕರಾಗಿದ್ದ ಡಾ. ನಾಗರೆಡ್ಡಿ ಅವರು ತದನಂತರ ಜನತಾದಳ ಸೇರ್ಪಡೆಯಾದರು. ಕಳೆದ ಎರಡು ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದರು. ಇವರ ಮಗ ಶಿವಶಾಂತರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿತ್ತು. ಸಹೋದರ ಹಾಗೂ ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೇ 6 ರಂದು ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.‌

Advertisement

Udayavani is now on Telegram. Click here to join our channel and stay updated with the latest news.

Next