Advertisement

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ

11:23 AM Sep 14, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ( ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

Advertisement

ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ.

ಇಷ್ಟು ವರ್ಷಗಳ ಕಾಲ ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ‌ ಅಂತರ ಕಾಯ್ದುಕೊಂಡಿದ್ದರು‌. ಆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದರು. ಆದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಮಧು ಬಂಗಾರಪ್ಪ ಬೇಸರಗೊಂಡಿದ್ದರು.

ಇದನ್ನೂ ಓದಿ: ಹೊಸಪೇಟೆ: ಖಾರದ ಪುಡಿ ಎರಚಿ 6 ಲಕ್ಷ ದೋಚಿದ ಕಳ್ಳರು

ಈ ಹಿನ್ನೆಲೆಯಲ್ಲಿ ವರಿಷ್ಢರ ಜತೆಗೆ ಖುದ್ದು ಮಾತನಾಡಿದ ಡಿ.ಕೆ.ಶಿವಕುಮಾರ್ ಓಬಿಸಿ ಅಧ್ಯಕ್ಷ ಸ್ಥಾನ ಲಭಿಸುವಂತೆ ನೋಡಿಕೊಂಡಿದ್ದಾರೆ. ಈಡಿಗ ಸಮುದಾಯಕ್ಕೆ ಸೇರಿರುವ ಮಧು ಬಂಗಾಪ್ಪ ಹಿಂದುಳಿದ ವರ್ಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಬಂಗಾರಪ್ಪ ಅವರ ನಾಮ ಬಲ ಅವರಿಗೆ ವರವಾಗಬಲ್ಲದು ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next