Advertisement

State Govt: ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರಕ್ಕೆ ಮಾಜಿ ಶಾಸಕ ಮುನಿಯಪ್ಪ ಹೆಸರು?

04:02 PM Feb 26, 2024 | Team Udayavani |

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಗಳ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ ರಚನೆಗೆ ಈಗಾಗಲೇ ಆದೇಶ ಹೊರಡಿಸಿರುವ ಸರ್ಕಾರ ಜಿಲ್ಲಾ ಮಟ್ಟದ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ಕಾಂಗ್ರೆಸ್‌ ವಲಯದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಗೃಹಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಪರಿ ಣಾಮಕಾರಿಯಾಗಿ ಅನುಷ್ಠಾನಗೊಳಿ ಸುವ ಸಂಬಂಧ ರಾಜ್ಯ ಸರ್ಕಾರ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ ರಚನೆಗೆ ಮುಂದಾಗಿದೆ.

ಎಸ್‌.ಎಂ.ಮುನಿಯಪ್ಪ ಹೆಸರು: ಜಿಲ್ಲಾ ಮಟ್ಟದಲ್ಲಿ ಅನುಷ್ಟಾನ ಪ್ರಾಧಿಕಾರಕ್ಕೆ ಒಬ್ಬರು ಅಧ್ಯಕ್ಷರು, ಉಪಾಧ್ಯಕ್ಷರ ಜೊತೆಗೆ 21 ಮಂದಿ ಸದಸ್ಯರು ಇರಲಿದ್ದಾರೆ. ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ಕ್ಷೇತ್ರದ ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ ಹೆಸರು ಕೇಳಿ ಬರುತ್ತಿದ್ದು, ಪ್ರಮುಖವಾಗಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌ ಅವರೇ ಖುದ್ದು ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮುನಿಯಪ್ಪರನ್ನು ನೇಮಕ ಮಾಡಲು

ಉತ್ಸುಕತೆ ತೋರಿದ್ದು, ಅವರ ಹೆಸರು ಅಂತಿಮಗೊಳಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶವಷ್ಟೇ ಹೊರ ಬೀಳಬೇಕಿದೆ ಎಂದು ಕಾಂಗ್ರೆಸ್‌ನ ಬಲ್ಲ ಮೂಲಗಳು ತಿಳಿಸಿವೆ.

2004ರಲ್ಲಿಯೇ ಮೀಸಲು ಕ್ಷೇತ್ರವಾಗಿದ್ದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಎಸ್‌.ಎಂ.ಮುನಿಯಪ್ಪ, ಅದಕ್ಕೂ ಮೊದಲು ಜಿಪಂ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಆರಂಭದಿಂದಲೂ ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠೆ ತೋರುತ್ತಾ ಬರುತ್ತಿರುವ ಎಸ್‌.ಎಂ.ಮುನಿಯಪ್ಪ ಈ ಹಿಂದೆ ಎರಡು ಬಾರಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸರಳ ಹಾಗೂ ಪಕ್ಷ ನಿಷ್ಠೆಗೆ ಹೆಸರಾಗಿರುವ ಎಸ್‌.ಎಂ.ಮುನಿಯಪ್ಪರನ್ನು ಜಿಲ್ಲಾ ಗ್ಯಾರಂಟಿಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನೇಮಿ

Advertisement

ಸಲು ಜಿಲ್ಲಾ ಉಸ್ತುವಾರಿ ಸಚಿವರು ಆಸಕ್ತಿ ತೋರಿದ್ದಾರೆ. ಅದೇ ರೀತಿ ಚಿಕ್ಕಬಳ್ಳಾಪುರ ತಾಲೂಕು ಪ್ರಾಧಿಕಾರಕ್ಕೆ ಸದ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಕಣಜೇನಹಳ್ಳಿ ಜಯರಾಮ್‌ ಹೆಸರು ಕೂಡ ಮುಂಚೂಣಿ ಯಲ್ಲಿದ್ದು,ಅವರ ಹೆಸರನ್ನು ಅಂತಿಮಗೊಳಿಸ ಲಾಗಿದೆಯೆಂದು ಮೂಲಗಳು ಉದಯವಾಣಿಗೆ ಮಾಹಿತಿ ನೀಡಿದೆ. ಜಿಲ್ಲಾ ಮಟ್ಟದ ಪ್ರಾಧಿಕಾರಕ್ಕೆ ಜಿಲ್ಲಾ ಕೇಂದ್ರದಲ್ಲಿ ಕಚೇರಿ ಸಹ ಸರ್ಕಾರವೇ ಒದಗಿಸಲಿದ್ದು, ಮಾಸಿಕ 50 ಸಾವಿರ ರೂ. ಗೌರವ ಧನ ಸಹ ಅಧ್ಯಕ್ಷರಿಗೆ ಸಿಗಲಿದೆ.

ವಿವಿಧ ಸಮಿತಿಗಳ 50 ಮಂದಿ ಹೆಸರುಗಳು ಅಂತಿಮ:

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಗರಸಭೆ, ಎಪಿಎಂಸಿ, ಟಿಎಪಿಸಿಎಂಎಸ್‌, ಭೂ ನ್ಯಾಯ ಮಂಡಳಿ, ಆರೋಗ್ಯ ಸಮಿತಿ, ನಗರಸಭೆಯ ಅಶ್ರಯ ಸಮಿತಿ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ, ಗ್ರಾಮೀಣ ಅಶ್ರಯ ಸಮಿತಿ, ಜಿಲ್ಲಾ ಹಾಗೂ ತಾಲೂಕು ಕೆಡಿಪಿ ಸಭೆ, ಆರಾಧನಾ ಸಮಿತಿ, ಬಗರ್‌ ಹುಕ್ಕಂ ಸಾಗುವಳಿ ಸಮಿತಿ ಸೇರಿ ವಿವಿಧ ಸಮಿತಿಗಳಿಗೆ 45 ರಿಂದ 50 ಮಂದಿ ಕಾಂಗ್ರೆಸ್‌ ಮುಖಂಡರ ಹಾಗೂ ಕಾರ್ಯಕರ್ತರನ್ನು ನಾಮ ನಿರ್ದೇಶನ ಮಾಡಲು ಪಟ್ಟಿ ಸಿದ್ಧಪಡಿಸಲಾಗಿದೆ. ಅಲ್ಲದೇ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌, ವಿವಿಧ ಸಮಿತಿಗಳ ನಾಮನಿರ್ದೇಶನ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಕ್ಷೇತ್ರದ ಹಿರಿಯ ಮುಖಂಡರಿಗೆ ಹಂಚಿಕೆ ಮಾಡಿದ್ದಾರೆಂದು ತಿಳಿದು ಬಂದಿದೆ.

– ಕಾಗತಿ ನಾಗರಾಜಪ್ಪ

Advertisement

Udayavani is now on Telegram. Click here to join our channel and stay updated with the latest news.

Next