Advertisement

ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ

12:07 PM Nov 03, 2015 | Mithun PG |

ಬೆಂಗಳೂರು: ಜೆಡಿಎಸ್ ಮಾಜಿ ಶಾಸಕ ಎಂ.ಎಸ್.ಅಕ್ಕಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.  ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಅಕ್ಕಿ ಜೊತೆಗೆ ನೂರಾರು ಜೆಡಿಎಸ್ ಕಾರ್ಯಕರ್ತರು ಕೈ ಸೇರ್ಪಡೆಯಾಗಿದ್ದಾರೆ.

Advertisement

ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಕ್ಕಿ ಶಾಸಕರಾಗಿ ನಮ್ಮ ಜೊತೆ ಕೆಲಸ ಮಾಡಿದ್ದರು. ನಮಗೆ ಸಾಕಷ್ಟು ಸಹಕಾರ ಮಾಡಿದ್ದರು. ಯಾವುದೇ ಕಂಡೀಷನ್ ಇಲ್ಲದೆ ಬಂದಿದ್ದಾರೆ. ತುಂಬಾ ಸಂಭಾವಿತ ಮನುಷ್ಯ. ದಿವಂಗತ ಶಿವಳ್ಳಿ ಹಾಗೂ ಅಕ್ಕಿ ಇಬ್ಬರೂ ಒಂದೇ ಊರಿನವರು. ಅಕ್ಕಿ ಜೊತೆ ತಾಲೂಕು ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ.  ಇದು ಆ ಭಾಗದಲ್ಲಿ ಪಕ್ಷಕ್ಕೆ ಮತ್ತಷ್ಟು‌ ಬಲತರಲಿದೆ ಎಂದರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಲ್ಲಿಕಾರ್ಜುನ ಅಕ್ಕಿ ಮಾತನಾಡಿ, ನಾನು 1987ಕ್ಕೆ ರಾಜಕೀಯಕ್ಕೆ ಬಂದವನು. ಜೆಡಿಎಸ್ ಪಕ್ಷದಲ್ಲೇ ಶಾಸಕನಾಗಿದ್ದೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡಯಾಗಿದ್ದೇನೆ. ನನ್ನ ಜೊತೆ ಬೆಂಬಲಿಗರೂ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳ ನಂಬಿ ಬಂದವನು. ಬಿಜೆಪಿಯನ್ನು ಎದುರಿಸುವ ಶಕ್ತಿ  ಡಿಕೆಶಿಯವರಿಗಿದೆ. ಹಾಗಾಗಿಯೇ ಇಂದು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯನವರ ಜೊತೆಯೂ ಮಾತನಾಡಿದ್ದೇನೆ. ಬಹಳ ಖುಷಿಯಿಂದ ಅವರು ಬೆನ್ನು ತಟ್ಟಿದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ…

Advertisement

ಆರ್.ಆರ್.ನಗರ ಹಲ್ಲೆ ಪ್ರಕರಣ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಕೊಲೆಗಳಾಗುತ್ತವೆ ಅಂದಿದ್ದಾರೆ. ಅವರು ಏನು ಬೇಕಾದರೂ ಮಾಡಲಿ. ನಾವು ಕಾಂಗ್ರೆಸ್ ಕ್ಷೇತ್ರ ಮಾಡೋಕೆ ಹೊರಟಿದ್ದೇವೆ. ನಾವು ಜನರನ್ನ ನಂಬಿದವರು. ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ ನೋಡುತ್ತಿರಿ ಎಂದರು.

ಇದನ್ನೂ ಓದಿ: ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!

Advertisement

Udayavani is now on Telegram. Click here to join our channel and stay updated with the latest news.

Next