ಬೆಂಗಳೂರು: ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಶುಕ್ರವಾರ ಹೃದಯಾಘಾತದ ಕಾರಣದಿಂದ ಬೆಂಗಳೂರಿನಲ್ಲಿ ನಿಧನರಾದರು.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಗೆಂದು ಶ್ರೀಶೈಲಪ್ಪ ಬಿದರೂರು ಅವರು ಬೆಂಗಳೂರಿಗೆ ಆಗಮಿಸಿದ್ದರು. ವರ್ತೂರಿನ ಪ್ರಷ್ಠಿ ವಿಲೇಜ್ ನಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.
ಇದನ್ನೂ ಓದಿ:ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ: ಸಚಿವ ಅಶ್ವತ್ಥನಾರಾಯಣ
Related Articles
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದ ಪ್ರಭಾವಿ ಲಿಂಗಾಯತ ನಾಯಕ ಶ್ರೀಶೈಲಪ್ಪ ಬಿದರೂರು ಅವರಿಗೆ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ನಂತರ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಅವರು 2019ರಲ್ಲಿ ಕಾಂಗ್ರೆಸ್ ಸೇರಿದ್ದರು. ಈ ಬಾರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.