Advertisement
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿಯೂ ಪಕ್ಷಾಂತರ ಪರ್ವ ಆರಂಭವಾಗಿದೆ. ಕಳೆದ ಬಾರಿ ಬೈಂದೂರು ಶಾಸಕರಾಗಿದ್ದ ಬಿ.ಎಂ. ಸುಕುಮಾರ ಶೆಟ್ಟರು ಬಿಜೆಪಿ ತೊರೆದು, ಕಾಂಗ್ರೆಸ್ ಸೇರುವುದು ಖಚಿತವಾಗಿದೆ.
Related Articles
ಸುಕುಮಾರ ಶೆಟ್ಟರು ಈ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಈಗ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ, ಗೃಹಸಚಿವ ಡಾ| ಜಿ. ಪರಮೇಶ್ವರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
Advertisement
ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 2-3 ಚುನಾವಣೆಗಳಲ್ಲಿ ಬಿಜೆಪಿಗೆ ಗರಿಷ್ಠ ಅಂತರದ ಮುನ್ನಡೆ ಸಿಗುತ್ತಿದ್ದು, ಅದೇ ದೃಷ್ಟಿಯಿಂದ ಸುಕುಮಾರ ಶೆಟ್ಟರನ್ನು ತಮ್ಮ ಕಡೆಗೆ ಸೆಳೆದುಕೊಂಡರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರಿಗೆ ಅನುಕೂಲ ಆಗಬಹುದು ಅನ್ನುವ ನಿಟ್ಟಿನಲ್ಲಿ ಈಗ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್‌ಗೆ ಸೇರುವುದು ಖಚಿತ. ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಸೇರ್ಪಡೆ ಯಾವಾಗ ಅನ್ನುವ ಬಗ್ಗೆ ಊರಿಗೆ ತೆರಳಿ ಹಿತೈಷಿಗಳು, ಬೆಂಬಗಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವೆ.– ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಮಾಜಿ ಶಾಸಕರು