Advertisement

ವಿಜಯಪುರ: ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ (64) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

Advertisement

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರೊಯಾಗದೇ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಪತ್ನಿ, ಮೂವರು ಪುತ್ರಿಯರು, ಅಪಾರ ಬಂಧುಗಳನ್ನು ಅಗಲಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ ವಿಲಾಸಬಾಬು ಶಾಸಕರಾಗಿದ್ದರು.

ಮಾಜಿ ಶಾಸಕ ವಿಲಾಸಬಾಬು ನಿಧನಕ್ಕೆ ಜಿಲ್ಲೆಯ ಸಚಿಚರು, ಶಾಸಕರು, ಮಾಜಿ ಸಚಿವ-ಶಾಸಕರು, ಗಣ್ಯರು, ಮಠಾಧೀಶರ‌ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next