ಹರಿಯಾಣ: 2024 ರ ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹೊಡೆತ ಬಿದ್ದಿದೆ. ಸಿರ್ಸಾದ ಮಾಜಿ ಸಂಸದ ಅಶೋಕ್ ತನ್ವಾರ್ ಅವರು ಬಿಜೆಪಿ ತೊರೆದು ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಗುರುವಾರ (ಅ. 3) ಮಹೇಂದ್ರಗಢದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ತನ್ವರ್ ಅವರು ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಭೂಪೇಂದ್ರ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.
ಅಶೋಕ್ ತನ್ವಾರ್ ಅವರು ಕಳೆದ ಜನವರಿಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ್ದರು ಆದರೆ ಇಂದು ಮತ್ತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 2014 ರಿಂದ 2019 ರವರೆಗೆ ಹರಿಯಾಣ ಕಾಂಗ್ರೆಸ್ ಮುಖ್ಯಸ್ಥರಾಗಿ ಸೇವೆಯನ್ನೂ ಸಲ್ಲಿಸಿದರು. ಇದಾದ ಬಳಿಕ ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು ಇದಾದ ಕೆಲವೇ ಸಮಯದಲ್ಲಿ ಬಿಜೆಪಿ ಪಕ್ಷವನ್ನು ಸೇರಿಕೊಂಡರು ಈ ವೇಳೆ ಸಿರ್ಸಾದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್‌ನ ಕುಮಾರಿ ಸೆಲ್ಜಾ ವಿರುದ್ಧ ಸೋಲುಂಡರು.
ಬಿಜೆಪಿ ಪರ ಪ್ರಚಾರ ನಡೆಸಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಸೇರ್ಪಡೆ:
ಗುರುವಾರ ಬೆಳಿಗ್ಗೆ ಜಿಂದ್ ಜಿಲ್ಲೆಯ ಸಫಿಡಾನ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ತನ್ವಾರ್ ರಾಲಿ ನಡೆಸಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ: Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು