ಬೆಂಗಳೂರು: ಮಾಜಿ ಸಂಸದೆ ರಮ್ಯಾರನ್ನು ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಆದರೆ, ಈ ಸಂಬಂಧ ಇನ್ನೂ ಅಧಿಕೃತ ಆದೇಶ ಹೊರ ಬಿದ್ದಿಲ್ಲ. ಶೀಘ್ರವೇ ಸೋನಿಯಾ ಗಾಂಧಿ ಅವರು ಈ ಸಂಬಂಧ ಅಧಿಕೃತ ಆದೇಶ ನೀಡಲಿದ್ದಾರೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳು ತಿಳಿಸಿವೆ. ಇದೇ ವೇಳೆ, ಹಾಲಿ ಅಧ್ಯಕ್ಷ, ಹರಿಯಾಣ ಸಂಸದ ದಿಪೇಂದ್ರ ಹೂಡಾ ಅವರಿಗೆ ಎಐಸಿಸಿ ಬೇರೆ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂದು
ಕಾಂಗ್ರೆಸ್ ಮೂಲಗಳು ತಿಳಿಸಿವೆ.