Advertisement
ರಮ್ಯಾ ಅವರು ಅಧಿಕೃತವಾಗಿ ಪಕ್ಷದ ಸಾಮಾಜಿಕ ಜಾಲ ತಾಣದ ಮುಖ್ಯಸ್ಥೆಯಾಗಿದ್ದರೂ, ಅನಗತ್ಯವಾಗಿ ಟ್ವೀಟ್ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಜತೆಗೆ ರಾಹುಲ್ ಗಾಂಧಿಯ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣಗಳ ಉಸ್ತುವಾರಿಯಿಂದ ಕೊಕ್ ನೀಡಿ ಆ ಜಾಗಕ್ಕೆ ಕೇಂದ್ರದ ಸಚಿವೆ ಮಾರ್ಗರೇಟ್ ಆಳ್ವಾ ಪುತ್ರ ನಿಖೀಲ್ ಆಳ್ವಾಗೆ ವಹಿಸಲಾಗಿದೆ ಎನ್ನಲಾಗಿದೆ.
ಹೀಗಾಗಿ, ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಮ್ಯಾ ಹೆಸರಿದ್ದರೂ ಅವರು ಪ್ರಚಾರ ಮಾಡಿದರೆ ಪಕ್ಷಕ್ಕೆ ಅನುಕೂಲಕ್ಕಿಂತ ನಷ್ಟವೇ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಪ್ರಚಾರದಿಂದ ದೂರ ಇಟ್ಟಿದ್ದರು. ಈಗ ರಮ್ಯಾ ಸದ್ಯಕ್ಕೆ ರಾಹುಲ್ ಗಾಂಧಿಯವರ ಟ್ವೀಟ್‌ಗಳನ್ನು ರಿಟ್ವೀಟ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾ ಘಟಕವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.