Advertisement

ಇಂದು ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿಗೆ ಸೇರ್ಪಡೆ

08:36 PM Nov 02, 2022 | Team Udayavani |

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

Advertisement

ಕಾಂಗ್ರೆಸ್‌ ತ್ಯಜಿಸುವುದಾಗಿ ಘೋಷಿಸಿದ್ದ ಮುದ್ದಹನುಮೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮ್ಮುಖದಲ್ಲಿ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್‌ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಅಥವಾ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯೂ ಇದೆ.

Advertisement

Udayavani is now on Telegram. Click here to join our channel and stay updated with the latest news.

Next