Advertisement

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

08:22 PM May 02, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ನಾಯಕರು ಮುಚ್ಚಿಹಾಕಲು ವ್ಯವಸ್ಥಿತ ಸಂಚು ನಡೆಸಿದ್ದಾರೆ. ಹಾಗಾಗಿ  ಬಿಜೆಪಿ ವಿರುದ್ಧವೂ ಎಸ್‌ಐಟಿ ತನಿಖೆ ಆಗಬೇಕೆಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆಗ್ರಹಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೂಗುವ ಕತ್ತಿಯಿಂದ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಎನ್ನುವಂತೆ, ಹೇಗಾದರೂ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಮೂಲಕ ಪ್ರಜ್ವಲ್‌ರನ್ನು ಪಾರು ಮಾಡುವ ಸಂಚು ನಡೆಯುತ್ತಿದೆ.

ಹೊಳೆನರಸೀಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು ನಾಲ್ಕು ತಿಂಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಪ್ರಜ್ವಲ್‌ ರೇವಣ್ಣ ಅವರ ಸಿ.ಡಿ.ಗಳು ಇವೆ ಎಂದು ಹೇಳಿದ್ದರು. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರಿಗೆ ಪತ್ರ ಬರೆದು ಪ್ರಜ್ವಲ್‌ಗೆ ಟಿಕೆಟ್‌ ನೀಡಬಾರದು ಎಂದು ಹೇಳಿದ್ದರು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next