ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಮುಂಬೈನ ಮಾಜಿ ಮೇಯರ್ ಮತ್ತು ಉದ್ಧವ್ ಠಾಕ್ರೆ ಬಣದ ನಾಯಕ ದತ್ತ ದಳವಿ ಅವರನ್ನು ಬುಧವಾರ ಬಂಧಿಸಲಾಗಿದೆ.
ಇಂದು (ಬುಧವಾರ) ಬೆಳಗ್ಗೆ ದಳವಿ ಅವರನ್ನು ಭಾಂಡೂಪ್ ಪೊಲೀಸರು ಬಂಧಿಸಿ ಮುಂಬೈನ ಉಪನಗರದಲ್ಲಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಸದ್ಯ ಡಿಸೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A(1)(a), 153B(1)(b), 153A(1)(c), 294, 504, ಮತ್ತು 505 ಅಡಿಯಲ್ಲಿ ದಾಲ್ವಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಉಪನಗರ ಭಾಂಡೂಪ್‌ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಭಾನುವಾರ ಸಭೆಯನ್ನು ಆಯೋಜಿಸಿತ್ತು ಅಲ್ಲಿ ದಳವಿ ಶಿಂಧೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬೆಂಬಲಿಗರೊಬ್ಬರು ಕೇಸು ದಾಖಲಿಸಿದ್ದಾರೆ.
ಇದನ್ನೂ ಓದಿ: HDK: ಭ್ರೂಣಹತ್ಯೆ ಪ್ರಕರಣ… ಆಡಳಿತ ವ್ಯವಸ್ಥೆಯ ವೈಫಲ್ಯವೂ ಎದ್ದು ಕಾಣುತ್ತಿದೆ: ಹೆಚ್ ಡಿಕೆ