Advertisement

Exposing Official Secrets: ಇಮ್ರಾನ್ ಖಾನ್, ಶಾ ಮೆಹಮೂದ್ ಖುರೇಷಿಗೆ 10ವರ್ಷ ಜೈಲು ಶಿಕ್ಷೆ

01:45 PM Jan 30, 2024 | Team Udayavani |

ಇಸ್ಲಾಮಾಬಾದ್: ರಾಜ್ಯದ ರಹಸ್ಯಗಳನ್ನು ಸೋರಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

Advertisement

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕಾರದಲ್ಲಿದ್ದಾಗ ರಾಜತಾಂತ್ರಿಕ ಕೇಬಲ್ ಅನ್ನು ಸಾರ್ವಜನಿಕಗೊಳಿಸುವುದರ ಮೂಲಕ ರಾಷ್ಟ್ರದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯವು ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಬುವಲ್ ಹಸ್ನಾತ್ ಮುಹಮ್ಮದ್ ಜುಲ್ಕರ್ನೈನ್ ಅವರು ಮಂಗಳವಾರ ಈ ಆದೇಶವನ್ನು ನೀಡಿದ್ದಾರೆ ಎಂದು ಇಮ್ರಾನ್ ಖಾನ್ ಅವರ ವಕೀಲ ಶೋಯೆಬ್ ಶಾಹೀನ್ ಅವರು ಮಾಹಿತಿ ನೀಡಿದ್ದಾರೆ. ಅವರ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಕೂಡ ಇದೇ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದಾರೆ ಎನ್ನಲಾಗಿದೆ.

ಈ ತೀರ್ಪಿನ ವಿರುದ್ಧ ಇಮ್ರಾನ್ ಖಾನ್ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ವಾಷಿಂಗ್ಟನ್‌ನಲ್ಲಿರುವ ದೇಶದ ರಾಯಭಾರಿ ಕಳುಹಿಸಿದ ರಹಸ್ಯ ಕೇಬಲ್‌ನ ವಿಷಯಗಳನ್ನು ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿರುವ ಸರ್ಕಾರಕ್ಕೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಇವರ ಮೇಲಿದೆ.

Advertisement

ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಇಬ್ಬರಿಗೂ ವಿಶೇಷ ನ್ಯಾಯಾಲಯವು ತಲಾ 10 ವರ್ಷಗಳ ಶಿಕ್ಷೆ ವಿಧಿಸಿದೆ ಎಂದು ಇಮ್ರಾನ್ ಖಾನ್ ಅವರ ಪಕ್ಷ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಹೇಳಿದೆ. ಪಕ್ಷವು ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: Panaji: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಭೀತಿ ಸೃಷ್ಟಿಸಿದ ಪ್ರಕರಣ;ಓರ್ವ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next