Advertisement

ಷರೀಫ್ ಚಿಂತಾಜನಕ

10:03 AM Oct 30, 2019 | Team Udayavani |

ಲಾಹೋರ್‌: ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್ ಆರೋಗ್ಯ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮೂರು ಬಾರಿ ಪ್ರಧಾನಿ ಯಾಗಿದ್ದ ಷರೀಫ್ (69) ಆರ್ಥಿಕ ಅಪರಾಧ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

Advertisement

ಜೈಲಿನಲ್ಲಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಅವರ ದೇಹದಲ್ಲಿ ರಕ್ತದ ಪ್ಲೇಟ್‌ಲೆಟ್‌ಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮಧುಮೇಹ, ರಕ್ತದೊತ್ತಡ ಕೂಡ ಭಾರೀ ಏರಿಕೆ ಕಂಡಿದೆ. ಕೇವಲ ಎರಡೇ ದಿನಲ್ಲಿ ಏಳು ಕೆಜಿ ತೂಕ ಕಡಿಮೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next