Advertisement

ಪಾಕಿಸ್ತಾನದ ಮಾಜಿ ಪ್ರಧಾನಿ ಯೂಸೂಫ್ ರಾಜಾ ಗಿಲಾನಿಗೆ ಕೋವಿಡ್ 19 ಪಾಸಿಟಿವ್ ದೃಢ

08:34 PM Jun 13, 2020 | Nagendra Trasi |

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಯೂಸೂಫ್ ರಾಜಾ ಗಿಲಾನಿಗೆ ಮಹಾಮಾರಿ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿರುವುದಾಗಿ ಮೂಲಗಳು ತಿಳಿಸಿವೆ.

Advertisement

“ನೀವು ನನ್ನ ತಂದೆಯ ಜೀವವನ್ನು ಅಪಾಯಕ್ಕೆ ಸಿಲುಕಿಸಿದ್ದೀರಿ ಹೀಗಾಗಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಹಾಗೂ ಎನ್ ಎಬಿಗೆ ಅಭಿನಂದನೆಗಳು” ಎಂದು ಗಿಲಾನಿ ಪುತ್ರ ಕ್ವಾಸಿಂ ಗಿಲಾನಿ ಆಕ್ರೋಶ ವ್ಯಕ್ತಪಡಿಸಿರುವುದಾಗಿ ಡಾನ್ ನ್ಯೂಸ್ ವರದಿ ಮಾಡಿದೆ.

67ವರ್ಷದ ಗಿಲಾನಿ ಅವರು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ ವಿಚಾರಣೆಗೆ ಹಾಜರಾದ ನಂತರ ಕೋವಿಡ್ 19 ವೈರಸ್ ತಗುಲಿರುವುದಾಗಿ ವರದಿ ತಿಳಿಸಿದೆ.

ಮಾಜಿ ಪ್ರಧಾನಿ ಗಿಲಾನಿ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪಿಪಿಪಿ ಪಾರ್ಲಿಮೆಂಟರಿ ಮುಖಂಡ ಶೆರೈ ರೆಹಮಾನ್ ಟ್ವೀಟ್ ಮಾಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಶಾಹಿದ್ ಅಫ್ರಿದಿಗೆ ಕೋವಿಡ್ 19 ಪಾಸಿಟಿವ್ ಎಂದು ಶನಿವಾರ ಬೆಳಗ್ಗೆ ವರದಿಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next