Advertisement
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಸಂಸದರಾದ ಸುರೇಶ್ ಅಂಗಡಿ, ಶಿವಕುಮಾರ ಉದಾಸಿಯವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಅಸ್ಥಿ ಕಳಶ ಸ್ವೀಕರಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿ ಹಲವು ನಾಯಕರು ಸ್ವಾಗತ ಕೋರಿದರು.
Related Articles
Advertisement
ಇಂದು ಕಾವೇರಿಗೆ ವಿಸರ್ಜನೆಗುರುವಾರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ಬೆಳಗ್ಗೆ 9 ಗಂಟೆಯಿಂದ ರಾಜ್ಯ ಬಿಜೆಪಿ ಕಾರ್ಯಾಲಯದಿಂದ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿ ನವರಂಗ್ ವೃತ್ತ, ವಿಜಯನಗರ, ಗಾಳಿ ಆಂಜನೇಯ ದೇವಸ್ಥಾನ, ರಾಜರಾಜೇಶ್ವರಿ ನಗರ ವೃತ್ತ, ಕೆಂಗೇರಿ ಮೂಲಕ ಸಾಗಲಿದೆ. ಬಿಡದಿಯಲ್ಲಿ ಕಳಶ ಸ್ವಾಗತಿಸಿ ನಂತರ ರಾಮನಗರ, ಚೆನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ 2 ಗಂಟೆಗೆ ಶ್ರೀರಂಗಪಟ್ಟಣಕ್ಕೆ ತಲುಪಿದ್ದು, ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಸಂಸದರಾದ ಪಿ.ಸಿ.ಮೋಹನ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಮೆರವಣಿಗೆಯಲ್ಲಿ ಸಾಗುವರು. ಪಶ್ಚಿಮ ವಾಹಿನಿ ಬಳಿ ಸಂಸದ ಪ್ರತಾಪಸಿಂಹ ಹಾಗೂ ಶಾಸಕರಾದ ರಾಮದಾಸ್, ಎಲ್.ನಾಗೇಂದ್ರ ಜತೆಗೂಡಲಿದ್ದಾರೆ . ನಂತರ ಆ.25 ರಂದು ನೇತ್ರಾವತಿ, ಮಲಪ್ರಭಾ, ಕೃಷ್ಣಾ , ಕಾರಂಜಾ, ತುಂಗಭದ್ರಾ, ಶರಾವತಿ , ತುಂಗಾ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.