Advertisement
ಸೋಮವಾರ ಮನಮೋಹನ್ ಸಿಂಗ್ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೊಳಪಡಿಸಿದಾಗ ಪಾಸಿಟವ್ ಸೋಂಕು ತಗುಲಿರುವುದು ದೃಢ ಪಟ್ಟಿದೆ ಎಂದು ವರದಿಗಳು ತಿಳಿಸಿವೆ.
Related Articles
Advertisement
ಕೇಂದ್ರದ ಮಾಜಿ ಸಚಿವ ಪಿ. ಚಿದಂಬರ್ ಸಹ ಟ್ವೀಟ್ ಮಾಡಿದ್ದು, ತೀವ್ರ ಜ್ವರದಿಂದಾಗಿ ಮನಮೋಹನ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಧೈರ್ಯದಿಂದ ಕೋವಿಡ್ ಎದುರಿಸಿ ಗುಣಮುಖರಾಗಿ ಹೊರಬನ್ನಿ ಎಂದು ಪ್ರಾರ್ಥಿಸುವುದಾಗಿ ಹೇಳಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಟ್ವೀಟ್ ಮಾಡಿದ್ದು, ಬಹುಬೇಗನೆ ಮನಮೋಹನ್ ಸಿಂಗ್ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.