ಮಡಿಕೇರಿ: ಅರುವತ್ತೂಕ್ಲು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ (57) ಗುಂಡೇಟಿಗೆ ಬಲಿಯಾಗಿ, ಅವರ ಪುತ್ರ ಧ್ಯಾನ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಸಂಭವಿಸಿದೆ.
Advertisement
ಧ್ಯಾನ್ ಅವರನ್ನು ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪ್ರಕಾಶ್ ಅವರ ಸಹೋದರ ಸುಬ್ರಮಣಿ ಅವರು ಬೇಗೂರು ಗ್ರಾಮದ ತೋಟದಲ್ಲಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸುಬ್ರಮಣಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.