ನವದೆಹಲಿ: ದೇಶಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಮಂಗಳವಾರ(ಸೆಪ್ಟೆಂಬರ್ 01, 2020) ಲೋಧಿ ಚಿತಾಗಾರದಲ್ಲಿ ನಡೆಯಿತು.
ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅವರು ಅಂತಿಮ ವಿಧಿ, ವಿಧಾನ ನೆರವೇರಿಸಿದ್ದರು, ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಕೇಂದ್ರ ಹಾಗೂ ಕೆಲವು ರಾಜ್ಯ ಸರ್ಕಾರಗಳು ಏಳು ದಿನಗಳ ಶೋಕಾಚರಣೆ ಘೋಷಿಸಿದ್ದವು.
ಇಂದು ಬೆಳಗ್ಗೆ ಪ್ರಣಬ್ ಪಾರ್ಥಿವ ಶರೀರರವನ್ನು ದಿಲ್ಲಿಯ 10ನೇ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಇರಿಸಲಾಗಿತ್ತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದರು.
ಕೋವಿಡ್ 19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ನಿಯಮಾವಳಿಯನ್ನು ಪಾಲಿಸಲಾಗಿತ್ತು ಎಂದು ವರದಿ ತಿಳಿಸಿದೆ. ಮೆದುಳು ಶಸ್ತ್ರಚಿಕಿತ್ಸೆಗಾಗಿ ಆರ್ಮಿ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ಪ್ರಣಬ್ ಮುಖರ್ಜಿ ಆಗಮಿಸಿದ್ದ ವೇಳೆ ಕೋವಿಡ್ 19 ಇದ್ದಿರುವುದು ಪತ್ತೆಯಾಗಿತ್ತು. ಸರ್ಜರಿ ನಂತರ ಮುಖರ್ಜಿ ಅವರು ಕೋಮಾಕ್ಕೆ ಜಾರಿದ್ದರು, ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ (2020) 30ರಂದು ಕೊನೆಯುಸಿರೆಳೆದಿದ್ದರು.