Advertisement

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೋವಿಡ್ 19 ದೃಢ

03:56 PM Aug 10, 2020 | Nagendra Trasi |

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ. ಮುಖರ್ಜಿ ಅವರು 2012ರಿಂದ 2017ರವರೆಗೆ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Advertisement

ಕೋವಿಡ್ 19 ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖರ್ಜಿ, ಕಳೆದ ವಾರ ಯಾರೆಲ್ಲಾ ತನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ದೇಶಾದ್ಯಂತ ಕೋವಿಡ್ 19 ವೈರಸ್ ಹರಡುತ್ತಿದ್ದು, ಈಗಾಗಲೇ ಸುಮಾರು 22ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ.  ಆರೋಗ್ಯ ತಪಾಷಣೆಗಾಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಕೋವಿಡ್ 19 ಪಾಸಿಟಿವ್ ವರದಿ ಬಂದಿರುವುದಾಗಿ ಮುಖರ್ಜಿ ತಿಳಿಸಿದ್ದಾರೆ.


ಕೋವಿಡ್ 19 ಸೋಂಕು ಪಾಸಿಟಿವ್ ವರದಿ ಬಂದಿದೆ ಎಂದು ಪ್ರಣಬ್ ಮುಖರ್ಜಿ ಟ್ವೀಟ್ ಮಾಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಶೀಘ್ರವೇ ಗುಣಮುಖರಾಗಿ ಎಂದು ಟ್ವೀಟ್ ಮಾಡುತ್ತಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next