Advertisement

ವಾಜಪೇಯಿ ಏಮ್ಸ್‌ಗೆ ದಾಖಲು

06:00 AM Jun 12, 2018 | Team Udayavani |

ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ (93) ಅವರನ್ನು ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಸಾಮಾನ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ರಣದೀಪ್‌ ಗುಲೇರಿಯಾ ತಿಳಿಸಿದ್ದಾರೆ. 

Advertisement

ಅಟಲ್‌ರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಜೆ.ಪಿ. ನಡ್ಡಾ,  ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸೋಮ ವಾರ ಸಂಜೆ ಏಮ್ಸ್‌ಗೆ ಧಾವಿಸಿದ್ದಾರೆ. “ಮಾಮೂಲಿ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇವಷ್ಟೇ, ಗಾಬರಿ ಪಡುವ ಅಗತ್ಯವಿಲ್ಲ, ಅಟಲ್‌ ಆರೋಗ್ಯ ವಾಗಿಯೇ ಇದ್ದಾರೆ’ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 

Advertisement

Udayavani is now on Telegram. Click here to join our channel and stay updated with the latest news.

Next