Advertisement

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

01:31 PM Apr 05, 2021 | Team Udayavani |

ಬೆಂಗಳೂರು :  ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು.  ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು.

Advertisement

ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು.  ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ ಜ್ವರ, ಉಸಿರಾಟದಲ್ಲಿ ಏರುಪೇರು ಕಂಡುಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next