Advertisement

ಅಸ್ಸಾಂ ಪ್ರವಾಹ ಪರಿಸ್ಥಿತಿಗೆ ಆತಂಕ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್ ಡಿಡಿ

03:08 PM Jul 17, 2020 | keerthan |

ಬೆಂಗಳೂರು: ಅಸ್ಸಾಂ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ  ಪರಿಸ್ಥಿತಿ ಉಂಟಾಗಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋವಿಡ್ ಸೋಂಕಿನ ನಡುವೆ ಪ್ರವಾಹದಿಂದ ಜನರು ಕಷ್ಟ ಅನುಭವಿಸುತ್ತಿರುವುದು ನೋಡಿದರೆ ಮನಸ್ಸಿಗೆ ನೋವುಂಟಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.

Advertisement

ಅಸ್ಸಾಂನಲ್ಲಿನ ಪ್ರವಾಹದ ವರದಿಗಳಿಂದ ನಾನು ತೀವ್ರವಾಗಿ ನೊಂದಿದ್ದೇನೆ.  ಕಳೆದ ಕೆಲವು ದಿನಗಳಿಂದ ಅಲ್ಲಿನ ಪರಿಸ್ಥಿತಿ ಸ್ಥಿರವಾಗಿ ಹದಗೆಡುತ್ತಿದೆ ಎಂದು ನನ್ನ ಗಮನಕ್ಕೆ ಬಂದಿದೆ, ಇತ್ತೀಚಿನ ವರದಿಗಳಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದು ನೋವಿನ ಸಂಗತಿ. ಈ ಪ್ರವಾಹದಿಂದ ಸುಮಾರು ನಲವತ್ತು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಸುಮಾರು 480 ಪರಿಹಾರ ಶಿಬಿರಗಳನ್ನು ಈಗಾಗಲೇ ಅಲ್ಲಿನ ರಾಜ್ಯ ಸರ್ಕಾರ ಸ್ಥಾಪಿಸಿದ್ದರೂ ಕೂಡ ಸಾರ್ವಜನಿಕರ ಮೂಲಸೌಕರ್ಯಗಳಿಗೆ ದೊಡ್ಡ ಪ್ರಮಾಣದ ಪೆಟ್ಟು ಬಿದ್ದಿದೆ ಎಂದಿದ್ದಾರೆ.

ಜೊತೆಗೆ ಸುಮಾರು 60 ಕ್ಕೂ ಹೆಚ್ಚು ಪ್ರಾಣಿಗಳು ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿರುವುದು ಕೂಡ ಬಹಳ ದುಃಖಕರವಾಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗವು ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವಾಗ ಅಸ್ಸಾಂನ ಜನರು ಪ್ರವಾಹ ಮತ್ತು ಅದರಿಂದ ಉಂಟಾದ ಸಾವು ನೋವುಗಳ ಜೊತೆ ಹೋರಾಡುತ್ತಿದ್ದಾರೆ ಮತ್ತು ಈ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶದಿಂದ ಸ್ಥಳಾಂತರಗಳ್ಳಲು ಹೋರಾಡುತ್ತಿರುವುದು ನೋಡಿದರೆ ಮನಸ್ಸಿಗೆ ಬಹಳ ನೋವುಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ಪರಿಸ್ಥಿತಿಯ ಬಗ್ಗೆ ತುರ್ತು ಗಮನ ಹರಿಸಬೇಕು, ಅಲ್ಲಿನ ರಾಜ್ಯ ಸರ್ಕಾರಕ್ಕೆ ಗರಿಷ್ಠ ನೆರವು ನೀಡಬೇಕೆಂದು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೋವಿಡ್-19 ರೋಗ ಕಡಿಮೆ ಆದ ತಕ್ಷಣ ನಾನು ಅಸ್ಸಾಂ ಹಾಗು ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುತ್ತೇನೆ ಎಂದು ಎಚ್ ಡಿಡಿ ಪತ್ರದಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next