ಚಂಡೀಗಢ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಮಂಗಳವಾರ(ನವೆಂಬರ್ 02) ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಏಳು ಪುಟಗಳ ರಾಜೀನಾಮೆ ಪತ್ರವನ್ನು ರವಾನಿಸಿರುವುದಾಗಿ ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಒಳ ಜಗಳದ ನಡುವೆ ಅಮರಿಂದರ್ ಸಿಂಗ್ ಅವರು ಸೆಪ್ಟೆಂಬರ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ:- ವಿದ್ಯುತ್ ತಂತಿ ತುಳಿದು 12 ವರ್ಷದ ಬಾಲಕ ಸಾವು
ಕೆಲವು ದಿನಗಳ ಹಿಂದೆ, ಕಾಂಗ್ರೆಸ್ ಜೊತೆಗಿನ ಸಂಧಾನ ಮಾತುಕತೆ ಪ್ರಸ್ತಾಪವನ್ನು ಸಿಂಗ್ ತಳ್ಳಿಹಾಕಿದ್ದರು, ಹೊಂದಾಣಿಕೆಯ ಸಮಯ ಮುಗಿದಿದೆ ಮತ್ತು ಹಳೆಯ ಪಕ್ಷವನ್ನು ತೊರೆಯುವ ನಿರ್ಧಾರವು ಅಂತಿಮವಾಗಿದೆ ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಅವರು ಹೇಳಿರುವುದು ಪಂಜಾಬ್ ರಾಜಕೀಯದಲ್ಲಿ ಹೊಸ ಕುತೂಹಲ ಸೃಷ್ಟಿಸಿದೆ.