ಬೆಂಗಳೂರು:ಕೇಂದ್ರದ ಮಾಜಿ ರೈಲ್ವೇ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್(85ವರ್ಷ) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸೋಮವಾರ ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಿಸ್ತಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ನಡೆಯಿತು.
ನಂದಿದುರ್ಗಾ ರಸ್ತೆಯ ಖುದ್ರುಸ್ ಜುಮ್ಮಾ ಮಸೀದಿಯಲ್ಲಿ ಷರೀಫ್ ಅವರ ಪಾರ್ಥಿವ ಶರೀರ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಷರೀಫ್ ಅವರು ಭಾನುವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ದಿನೇಶ್ ಗುಂಡೂರಾವ್, ಸಚಿವ ಯುಟಿ ಖಾದರ್, ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಷರೀಫ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಷರೀಫ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು, ಬಳಿಕ ಖುದ್ದೂಸ್ ಸಾಬ್ ಸ್ಮಶಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.