Advertisement

ಮಾಜಿ ಎಸ್‌ಪಿ ಎಂಎಲ್‌ಸಿ ಸರೋಜಿನಿ ಅಗ್ರವಾಲ್‌ ಬಿಜೆಪಿಗೆ

03:15 PM Aug 12, 2017 | Team Udayavani |

ಲಕ್ನೋ : ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಮಾಜಿ ಸಮಾಜವಾದಿ ಪಕ್ಷದ ಸದಸ್ಯೆ ಸರೋಜಿನಿ ಅಗ್ರವಾಲ್‌ ಅವರಿಂದು ಬಿಜೆಪಿ ಪ್ರಧಾನ ಕಾರ್ಯಾಲಯದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯಾಗಿರುವ ಕೇಶವ್‌ ಪ್ರಸಾದ್‌ ಮೌರ್ಯ ಅವರ ಸಮ್ಮುಖದಲ್ಲಿ, ಬಿಜೆಪಿಯನ್ನು ಸೇರಿದರು. 

Advertisement

ಸಮಾಜವಾದಿ ಪಕ್ಷದ ಹಿರಿಯ ನಾಯಕರಾಗಿರುವ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ಕಡೆಗಣಿಸಲಾಗುತ್ತಿರುವುದರಿಂದ ಪಕ್ಷದಲ್ಲಿ ಮುಂದುವರಿಯುವುದರಲ್ಲಿ ನನಗೆ ಹಿತ ಕಾಣುತ್ತಿಲ್ಲ ಎಂದು ಹೇಳಿದ್ದ ಅಗ್ರವಾಲ್‌ ಆ.4ರಂದು ತಮ್ಮ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next